May 17, 2026

ರೈನ್ ಬೋ ಲೇಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ: ಕೆಆರ್ ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಪುತ್ತೂರು ಅಮಾನತು

0
IMG-20221124-WA0054.jpg

ಪತ್ತೂರು: ರೈನ್ ಬೋ ಲೇಔಟ್ ಒತ್ತುವರಿಯಾದರೂ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದ ಆರೋಪದ ಮೇಲೆಗೆ ಕೆ ಆರ್‍ ಪುರಂ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಅಮಾನತುಗೊಳಿಸಲಾಗಿದೆ.

ಒತ್ತುವರಿದಾರರಿಗೆ ಸಹಕರಿಸಿದ ಆರೋಪ, ತೆರವು ಮಾಡದೆ ಸಹಕರಿಸಿದ್ದು, ಹೀಗೆ ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ ನಗರಾಭಿವೃದ್ಧಿ ಇಲಾಖೆ ಪುತ್ತೂರಿನ ಅಜಿತ್ ಕುಮಾರ್‍ ರೈ ಅವರನ್ನು ಸಸ್ಪೆಂಡ್ ಮಾಡಿದೆ.

ಈ ಹಿಂದೆ ದೇವಸ್ಥಾನದ ಜಾಗ ಕಬಳಿಕೆಗೆ ಸಂಬಂಧಿಸಿದಂತೆ ವರದಿ ಸಲ್ಲಿಸದ ಅಜಿತ್ ಕುಮಾರ್ ರೈಗೆ ಕರ್ನಾಟಕ ಭೂಕಬಳಿಕ‌ ನಿಷೇಧ ನ್ಯಾಯಾಲಯವು 25 ಸಾವಿರ ದಂಡ ವಿಧಿಸಿ ಜಾಮೀನು ಸಹಿತ ಬಂಧನ ವಾರೆಂಟ್ ಹೊರಡಿಸಿತ್ತು.

2011 ರಲ್ಲಿ ಬಾಳಪ್ಪ ಹಂದಿಗುಂದ ತಹಶೀಲ್ದಾರ್ ಆಗಿದ್ದ ವೇಳೆ ದೇವಸ್ಥಾನಕ್ಕೆ ಸೇರಿದ ಸರ್ಕಾರಿ ಭೂಮಿಯನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಿರುವ ಬಗ್ಗೆ ಬೆಳತ್ತೂರು ಪರಮೇಶ್ ಎಂಬವರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ತಹಶೀಲ್ದಾರ್ ಅಜಿತ್ ಕುಮಾರ್ ರೈ ಗೆ ಸೂಕ್ತ ದಾಖಲಾತಿಗಳೊಂದಿಗೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶನ ನೀಡಿತ್ತು. ಆದರೆ ತಹಶೀಲ್ದಾರ್ ಹಾಜರಾಗದ ಹಿನ್ನೆಲೆಯಲ್ಲಿ ಜುಲೈ 19 ರಂದು ಬೆಳಗ್ಗೆ 11 ಗಂಟೆಗೆ 25 ಸಾವಿರ ದಂಡದ ಜೊತೆಗೆ ಜಾಮೀನು ಸಹಿತ ಬಂಧನ ವಾರೆಂಟ್ ನ್ನು ನೀಡಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶ ಹೊರಡಿಸಿತ್ತು.

Leave a Reply

Your email address will not be published. Required fields are marked *

error: Content is protected !!