March 21, 2026

ಚಾರ್ಮಾಡಿ: ಆಂಬ್ಯುಲೆನ್ಸ್ ಮತ್ತು ಅಟೋ ರಿಕ್ಷಾ ಮುಖಾಮುಖಿ ಡಿಕ್ಕಿ..ಅದೇ ಸ್ಥಳದಲ್ಲಿ ಮತ್ತೊಂದು ಆಂಬ್ಯುಲೆನ್ಸ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ

0
IMG-20221124-WA0090

ಚಾರ್ಮಾಡಿ: ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದುಚಾರ್ಮಾಡಿ ಘಾಟ್ ನ ತಿರುವಿನಲ್ಲಿ ನಡೆದಿದೆ

ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಗಾಯವಾಗಿದ್ದು, ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.
ಬಣಕಲ್ ಪಟ್ಟಣದ ಆಟೋವಾಗಿದ್ದು, ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳ ಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಅಪಘಾತ ನಡೆದಿದೆ ಎನ್ನಲಾಗಿದೆ.
ಇನ್ನು ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ.

ಚಾರ್ಮಾಡಿ ಘಾಟ್ ನಲ್ಲಿ ಸಂಜೆ ಆದ ಅಪಘಾತ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡದೇ ಇರುವುದರಿಂದ ಮೂಡಿಗೆರೆಯ ಬಿದಿರಹಳ್ಲಿಯಲ್ಲಿ ನಡೆದ ಮತ್ತೊಂದು ಕಾರು ಮತ್ತು ಅಟೋ ರಿಕ್ಷಾ ಅಪಘಾತದ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್ ಗೆ ಟ್ಯಾಂಕರ್ ಡಿಕ್ಕಿಯಾದ ಘಟನೆ ನಡೆದಿದೆ.
ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು ರಸ್ತೆ ಸುಗಮ ಸಂಚಾರ ಮಾಡದೇ ಇರುವುದರಿಂದ ಈ ಅಪಘಾತ ಕ್ಕೆ ಕಾರಣ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!