ಮಂಗಳೂರು: ಸುರತ್ಕಲ್ ಟೋಲ್ ವಿಲೀನ: ಡಿ.1ರಿಂದ ಹೆಜಮಾಡಿ ಟೋಲ್ ದುಬಾರಿ
ಮಂಗಳೂರು: ಸುರತ್ಕಲ್ ಟೋಲ್ ಗೇಟ್ ಅನ್ನು, ಡಿ.1ರಿಂದ ಹೆಜಮಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡುವಂತೆ ಸರಕಾರ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆಜಮಾಡಿಯಲ್ಲಿ ಟೋಲ್ ಗೇಟ್ ಶುಲ್ಕ ಪರಿಷ್ಕೃರಿಸಿದೆ.ಹೀಗಾಗಿ ನಿರೀಕ್ಷೆಯಂತೆ ಹೆಜಮಾಡಿಯಲ್ಲಿ ಸುಂಕ ದುಬಾರಿಯಾಗಲಿದೆ.
ಹೆಜಮಾಡಿ ಟೋಲ್ ಗೇಟ್‌ನಲ್ಲಿ ಟೋಲ್ ಸಂಗ್ರಹಕ್ಕೆ ಯಾವುದೇ ಅಡ್ಡಿ ಅಥವಾ ತೊಂದರೆ ನೋಡಿಕೊಳ್ಳಬೇಕು ಮತ್ತು ಒಂದು ವೇಳೆ ಹೆಜಮಾಡಿಯಲ್ಲಿ ವಿಲೀನದ ಬಳಿಕ ಏರಿಕೆಯಾದ ಸುಂಕದ ಬಳಿಕ ಯಾವುದೇ ಸಮಸ್ಯೆಯಾಗಿ ಟೋಲ್ ಸಂಗ್ರಹದಲ್ಲಿ ವ್ಯತ್ಯಯ ಉಂಟಾದರೆ ಎನ್‌ಎಚ್‌ಎಐ ಜತೆಗಿನ ರಾಜ್ಯ ಸಹಕಾರ ಒಪ್ಪಂದದಂತೆ ನಷ್ಟವನ್ನು ರಾಜ್ಯವೇ ಭರಿಸಬೇಕುಎಂದು ಎನ್‌ಎಚ್‌ಎಐ ಆದೇಶದಲ್ಲಿ ಹೇಳಲಾಗಿದೆ.
ಇದಲ್ಲದೆ ಇದುವರೆಗೆ ಸುರತ್ಕಲ್ ಟೋಲ್‌ಗೇಟ್‌ನಲ್ಲಿ ಕೆಎ 19 ನೋಂದಣಿಯ ಕಾರುಗಳಿಗೆ ಇದ್ದ ರಿಯಾಯಿತಿ ರದ್ದಾಗಲಿದೆ.