August 14, 2026

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

0
IMG-20221125-WA0023.jpg

ಬೆಂಗಳೂರು: ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಗೆಂದು ಬಂದಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಇಂದು ಹೃದಯಾಘಾತದದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ವರ್ತೂರಿನ ಪ್ರಷ್ಠಿ ವಿಲೇಜ್‌ ನಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಶ್ರೀಶೈಲಪ್ಪ ಬಿದರೂರು ರೋಣ ಹಾಗೂ ಗದಗ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಅವರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!