August 13, 2026

ಕುಡಿದ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕನ ವಿರುದ್ಧ ದೂರು

0
image_editor_output_image1484432843-1669373045985.jpg

ತುಮಕೂರು: ಕುಡಿದ ಮತ್ತಿನಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಶಾಲೆಯ ಆಡಳಿತ ಮಂಡಳಿಯ ನಿರ್ದೇಶಕ ಮನಸೋ ಇಚ್ಚೆ ದಾಳಿ ಮಾಡಿರುವ ಘಟನೆ ತುಮಕೂರು ತಾಲೂಕಿನ ಮಲ್ಲಸಂದ್ರದ ವಿಶ್ವಭಾರತಿ ವಸತಿ ಶಾಲೆಯಲ್ಲಿ ನಡೆದಿದೆ.

ಆರೋಪಿಯನ್ನು ಶಾಲೆಯ ಕಾರ್ಯದರ್ಶಿ ಎನ್ ಮೂರ್ತಿಯ ಮಗ ಮತ್ತು ನಿರ್ದೇಶಕ ಭರತ್ ಎಂದು ಗುರುತಿಸಲಾಗಿದ್ದು, ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಬೆಲ್ಟ್ ಮತ್ತು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ.

ನಾಲ್ಕು ದಿನಗಳು ಕಳೆದರೂ ಈ ವಿಚಾರವನ್ನು ಶಾಲಾ ಆಡಳಿತ ಮಂಡಳಿ ಮುಚ್ಚಿಟ್ಟಿತ್ತು. ಆದರೆ ನಂತರ ಪೋಷಕರು ವಿಚಾರ ತಿಳಿದು ಮಕ್ಕಳನ್ನು ಭೇಟಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!