February 3, 2026

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಅವಾಚ್ಯ ಪದಗಳಿಂದ ನಿಂದನೆ: ಬಳಿಕ ಬೇಷರತ್ ಕ್ಷಮೆಯಾಚಿಸಿದ ಶಾಸಕ

0
image_editor_output_image-527937040-1669377580088.jpg

ವಿಜಯನಗರ : ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಬೇಷರತ್ ಕ್ಷಮೆಯಾಚಿಸಿದ್ದಾರೆ.

‘ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಪರಿಣಾಮ ರೈತರ ನೋವು, ಕಣ್ಣೀರು ನನ್ನನ್ನು ಉದ್ವೇಗಕ್ಕೆ ಒಳಗಾಗುವಂತೆ ಪ್ರೇರೇಪಿಸಿತು. ಪ್ರಧಾನಿಯವರ ಕುರಿತು ನಾನು ಬಳಸಿದ ಅವಹೇಳನ ಪದಗಳಿಗೆ ಕ್ಷಮೆಯಾಚಿಸುವೆ’ ಎಂದು ವಿಡಿಯೊದಲ್ಲಿ ತಿಳಿಸಿದ್ದಾರೆ.

‘ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕೆಟ್ಟ ನಿರ್ಧಾರಗಳನ್ನು ಖಂಡಿಸುತ್ತೇನೆ’ ಎಂದು ಹೇಳಿದರು. ಪ್ರಧಾನಿಯವರನ್ನು ನಿಂದಿಸಿದ ವಿಡಿಯೊ ಶುಕ್ರವಾರ ಮಧ್ಯಾಹ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಬಿಜೆಪಿಯವರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದರ ಬೆನ್ನಲ್ಲೇ ಶಾಸಕರು ಕ್ಷಮೆಯಾಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!