ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮೂವರು ಅಧಿಕಾರಿಗಳು ಅಮಾನತು
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ. ಮೂವರು ಅಧಿಕಾರಿಗಳನ್ನು ಅಕ್ರಮಕ್ಕೆ ಸಂಬಂಧಿಸಿದಂತೆ ಅಮಾನತು ಮಾಡಲಾಗಿದೆ. ಈ ಸಂಬಂಧ ಮಹದೇವಪುರ, ಚಿಕ್ಕಪೇಟೆ ಮತ್ತು ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಅಧಿಕಾರಿಗಳನ್ನು ಅಮಾನತು ಮಾಡಿದ್ದು, ಈ ಕ್ಷೇತ್ರಗಳಲ್ಲಿ ಮತ್ತೊಮ್ಮೆ ಮತದಾರರ ಪಟ್ಟಿ ಪರಿಷ್ಕರಣೆಗೆ, 100 ಪರ್ಸೆಂಟ್ ಪರಿಷ್ಕರಣೆಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನಿರ್ದೇಶನ ನೀಡಿದೆ.
ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಇಲಾಖೆ ವಿಚಾರಣೆಗೆ ಸೂಚಿಸಿರುವ ಆಯೋಗ, ಮೇಲ್ವಿಚಾರಣೆಗೆ ಬಿಬಿಎಂಪಿ ಹೊರಗಿನ ವಿಶೇಷ ಅಧಿಕಾರಿ ನೇಮಿಸಬೇಕು, ಮತದಾರರ ಪಟ್ಟಿ ಪರಿಶೀಲನೆಯನ್ನು ಅಧಿಕಾರಿಗಳೇ ಮಾಡಬೇಕು, ಪ್ರತ್ಯೇಕ್ಷ, ಪರೋಕ್ಷವಾಗಿ ಅಕ್ರಮವಾಗಿದ್ದರೆ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ದಿನಾಂಕವನ್ನು ಡಿ.24ರವರೆಗೆ ವಿಸ್ತರಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆಗೆ ಬಿಬಿಎಂಪಿಯಿಂದ ಹೊರತಾದ ಇಬ್ಬರು ವಿಶೇಷಾಧಿಕಾರಿಗಳ ನೇಮಿಸಬೇಕು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅನಧಿಕೃತವಾಗಿ ಅಥವಾ ಪರೋಕ್ಷವಾಗಿ ದಾಖಲೆ ಸಂಗ್ರಹಿಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.