August 14, 2026

ಮಂಗಳೂರು: ರಸ್ತೆ ಬದಿಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಬೆಂಕಿ

0
image_editor_output_image1285398396-1669453188477

ಮಂಗಳೂರು : ನಗರದ ಬಲ್ಮಠ ರಸ್ತೆ ಬದಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರೊಂದು ಬೆಂಕಿಗಾಹುತಿಯಾದ ಘಟನೆ ಇಂದು ಅಪರಾಹ್ನ ಸಂಭವಿಸಿದೆ.

ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಪಾರ್ಕ್ ಮಾಡಲಾಗಿದ್ದ ಫೋರ್ಡ್‌ ಕಂಪೆನಿ ಕಾರು ಬೆಂಕಿಗಾಹುತಿಯಾಗಿದೆ.

ಕಾರಿನ ಇಂಜಿನ್ ನಲ್ಲಿ ದಟ್ಟವಾದ ಹೊಗೆ ಬರಲಾರಂಭಿಸಿ ನೋಡ – ನೋಡುತ್ತಿದ್ದಂತೆ ಪರಿಸರವೆಲ್ಲ ಹೊಗೆಯಿಂದ ಆವೃತವಾಗಿತ್ತು.

ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿಗೆ ಕಾರಣ ಏನೆಂದು ತಿಳಿದು ಬಂದಿಲ್ಲವಾದರೂ ಶಾರ್ಟ್ ಸರ್ಕಿಟ್ ಬೆಂಕಿಗೆ ಕಾರಣವೆಂದು ಶಂಕಿಸಲಾಗಿದೆ.  ಸ್ಥಳಕ್ಕೆ  ACP ಗೀತಾ ಕುಲಕರ್ಣಿ, ಕದ್ರಿ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!