August 14, 2026

ಶ್ರದ್ದಾ ಹತ್ಯೆ ಪ್ರಕರಣ – ಆರೋಪಿ ಅಫ್ತಾಬ್‌ಗೆ 14 ದಿನಗಳ ನ್ಯಾಯಾಂಗ ಬಂಧನ

0
IMG-20221126-WA0032.jpg

ನವದೆಹಲಿ: ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ಆರೋಪಿ ಅಫ್ತಾಬ್ ಅಮಿನ್ ಪೂನಾವಾಲಾಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ವೀಡಿಯೋ ಕಾನ್ಫರೆನ್ಸ್‌ ಮೂಲಕ ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಬಳಿಕ 14 ದಿನಗಳನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ನಾರ್ಕೋ ಪರೀಕ್ಷೆಯ ಮೊದಲು ಆತನನ್ನು ದೆಹಲಿ ಪೊಲೀಸರು ಅಂಬೇಡ್ಕರ್‍ ಆಸ್ಪತ್ರೆಗೆ ಕರೆದೊಯ್ದಿದ್ದರು. ಇದೀಗ ಆತನನ್ನು ತಿಹಾರ್‍ ಜೈಲಿಗೆ ಕಳುಹಿಸಲಾಗುತ್ತಿದೆ.

ಇನ್ನು ದೆಹಲಿಯಲ್ಲಿ ತನ್ನ ಲಿವ್ ಇನ್ ಸಂಗಾತಿ ಶ್ರದ್ದಾ ವಾಕರ್‌ ಎಂಬಾಕೆಯನ್ನು ಹತ್ಯೆಗೈದು ದೇಹವನ್ನು 35 ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದ ಆರೋಪಿ ಅಫ್ತಾಬ್‌ನನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!