May 12, 2026

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

0
IMG-20221127-WA0011.jpg

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ಸಂವಿಧಾನ ಶಿಲ್ಪಿ ಡಾ.ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಕ್ಷೇವಿಯರ್ ಡಿಸೋಜಾ, ನಿವೃತ್ತ ಪ್ರಾಂಶುಪಾಲರು ಮಹಿಳಾ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇವರು ಸಂವಿಧಾನ ದಿನಾಚರಣೆಯ ಕುರಿತು ವಿದ್ಯಾರ್ಥಿಗಳನ್ನುದ್ದೇಶಿಸಿ ಭಾರತ ಸಂವಿಧಾನದ ರಚನೆಗಾಗಿ ಶ್ರಮಿಸಿದವರಲ್ಲಿ ಸಂವಿಧಾನ ಶಿಲ್ಪಿ ಡಾ ll ಬಿ.ಆರ್ ಅಂಬೇಡ್ಕರ್ ಕುರಿತಾಗಿ ಮತ್ತು ಇಂದಿನ ಯುವ ಪೀಳಿಗೆಗೆ ಮತ್ತು ಪ್ರಸ್ತುತ ಸಮಾಜಕ್ಕೆ ಭಾರತ ಸಂವಿಧಾನದಲ್ಲಿ ತಿಳಿಸಲಾದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಇರಬೇಕಾದ ಅರಿವು ಮತ್ತು ಜಾಗೃತಿಯ ಸಂದೇಶವನ್ನು ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಆದರ್ಶ ಚೊಕ್ಕಾಡಿ ಅಧ್ಯಕ್ಷತೆಯನ್ನು ವಹಿಸಿದ್ದರು.ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಮಾಧವ ವಿ.ಎಸ್ ಪ್ರಸ್ತಾವಿಸಿ, ಸ್ವಾಗತಿಸಿ, ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ನೆರವೇರಿಸಿದರು.ಉಪ ಪ್ರಾಂಶುಪಾಲರಾದ ಕಿರಣ್ ಕುಮಾರ್, ಪ್ರೌಢ ಶಾಲೆ ಹಾಗೂ ಕಾಲೇಜಿನ ಶಿಕ್ಷಕ -ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಮುಕ್ತಶ್ರೀ ನಿರೂಪಿಸಿ, ಉಪನ್ಯಾಸಕ ಚಂದ್ರಕಾಂತ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!