February 3, 2026

ಕೆನಡಾದಲ್ಲಿ ರಸ್ತೆ ಅಪಘಾತ – ಭಾರತೀಯ ಮೂಲದ ವಿದ್ಯಾರ್ಥಿ ಸಾವು

0
IMG-20221127-WA0021.jpg

ಕೆನಡಾ: ಸೈಕಲ್‌ನಲ್ಲಿ ರಸ್ತೆ ದಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ 20 ವರ್ಷದ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಕೆನಡಾದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಕಾರ್ತಿಕ್ ಸೈನಿ ಎಂದು ಗುರುತಿಸಲಾಗಿದೆ.

ಕಾರ್ತಿಕ್ ಸೈನಿ 2021ರ ಆಗಸ್ಟ್‌ನಲ್ಲಿ ಭಾರತದಿಂದ ಕೆನಡಾಕ್ಕೆ ತೆರಳಿದ್ದು, ಅವರ ಕುಟುಂಬವು ಹರಿಯಾಣದ ಕರ್ನಾಲ್‌ನಲ್ಲಿ ನೆಲೆಸಿದೆ ಎಂದು ತಿಳಿದು ಬಂದಿದೆ.

ಇನ್ನು ಕಾರ್ತಿಕ್ ಕೆನಡಾದ ಶೆರಿಡನ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಮಗನ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಹಿಂದಿರುಗಿಸಬೇಕೆಂದು ಕುಟುಂಬ ಮನವಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!