ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಹಿಳೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಹಿಳೆಯನ್ನು ಕತೀಜಾ ಕೂಬ್ರ (29) ಎಂದು ಗುರುತಿಸಲಾಗಿದೆ. ಗಂಡನ ಮನೆಯವರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂದು ಕತೀಜಾ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.
ಪತಿ ಮಹೆಬೂಬ್ ಪರೀಷ್ ಪತ್ನಿಯನ್ನ ಹೊಡೆದು ನೇಣು ಹಾಕಿರೋ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಮೃತ ಕತೀಜಾ ಗಂಡ, ಮಾವ ಮತ್ತು ನಾದಿನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದುಗುಂಟೆ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಗುರುಪನ್ನಪಾಳ್ಯದಲ್ಲಿ ಈ ಘಟನೆ ನಡೆದಿದ್ದು, ಸದುಗುಂಟೆಪಾಳ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.