ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್
ಭೋಪಾಲ್: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭಾರತ್ ಜೋಡೋ ಯಾತ್ರೆಯಲ್ಲಿ ಬಿದ್ದು ಕೈ ಮುರಿದುಕೊಂಡಿದ್ದಾರೆ.
ಮಧ್ಯಪ್ರದೇಶದ ಇಂದೋರ್‌ನಲ್ಲಿ ಯಾತ್ರೆ ಸಾಗುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ವೇಣುಗೋಪಾಲ್‍ರನ್ನು ತಳ್ಳಿಕೊಂಡು ಅಭಿಮಾನಿಗಳು ನುಗ್ಗಿದ್ದಾರೆ.
ಈ ವೇಳೆ ಬಿದ್ದ ವೇಣುಗೋಪಾಲ್ ಮೊಣಕಾಲು ಮತ್ತು ಕೈಗೆ ಗಾಯ ಮಾಡಿಕೊಂಡಿದ್ದಾರೆ. ಬಳಿಕ ವೈದ್ಯರು ಪರೀಕ್ಷಿಸಿದಾಗ ಕೈ ಮೂಳೆ ಫ್ಯಾಕ್ಚರ್ ಆಗಿರುವ ಬಗ್ಗೆ ತಿಳಿದುಬಂದಿದೆ.




