March 20, 2026

ಬಜ್ಪೆ: ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿ: ಆರೋಪಿಯನ್ನು ಬಂಧಿಸಿದ ಪೊಲೀಸರು

0
image_editor_output_image-93511456-1669623025302

ಮಂಗಳೂರು:  ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬಜ್ಪೆ ಪೋಲಿಸ್‌ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ ನ. 27 ರ ಭಾನುವಾರ ನಡೆದಿದೆ.

ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್ ಆರೋಪಿಯಾಗಿದ್ದು ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.

ನ. 27 ರಂದು ಭಾನುವಾರ ರಾತ್ರಿ ಪತಿ -ಪತ್ನಿ ನಡುವೆ ಜಗಳವಾಗಿದ್ದು, ಈ ವೇಳೆ ಪತ್ನಿ ಸರಿತಾಳ ಮೇಲೆ ದುರ್ಗೇಶ್ ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು, ಇದೆಲ್ಲವನ್ನು ಕಂಡು ದಂಪತಿಯ ಹನ್ನೊಂದು ವರ್ಷದ ಮಗ ಹೆದರಿ ಓಡಿಹೋಗಿದ್ದಾನೆ. ಇತ್ತ ತೀವ್ರ ರಕ್ತಸ್ರಾವವಾಗಿ ಸರಿತಾ ಸಾವನ್ನಪ್ಪಿದ್ದಾರೆ.

ಬಜ್ಪೆ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!