August 14, 2026

ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ?: ಗೃಹ ಸಚಿವ ಅರಗ ಜ್ಞಾನೇಂದ್ರಗೆ ಕಾಂಗ್ರೆಸ್ ಪ್ರಶ್ನೆ

0
IMG-20221128-WA0014.jpg

ಬೆಂಗಳೂರು: ರೌಡಿಗಳನ್ನು ಹಿಡಿಯುವ ಯೋಗ್ಯತೆ ನಿಮ್ಮ ಇಲಾಖೆಗೆ ಇಲ್ಲವೇ ಅಥವಾ ನೀವೇ ಪೊಲೀಸರನ್ನು ಕಟ್ಟಿಹಾಕಿದ್ದೀರಾ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಕ್ರಿಮಿನಲ್‌ಗಳೊಂದಿಗೆ ಬಿಜೆಪಿಯ ನೆಂಟಸ್ತಿಕೆ ಇರುವಾಗ ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಏರದಿರುತ್ತದೆಯೇ? ಸಿಸಿಬಿ ಪೊಲೀಸರ ಕೈಗೆ ಸಿಗದ ರೌಡಿ ಬಿಜೆಪಿ ನಾಯಕರ ಕೈಗೆ ಸಿಕ್ಕಿದ್ದು ಹೇಗೆ? ಎಂದು ಪ್ರಶ್ನಿಸಿದೆ.

ಇನ್ನು ವಾಂಟೆಡ್ ಲಿಸ್ಟ್‌ನಲ್ಲಿರುವ ರೌಡಿ ಪೊಲೀಸರ ಕೈಗೆ ಸಿಗುವುದಿಲ್ಲ, ಆದರೆ ಬಿಜೆಪಿ ನಾಯಕರ ಜೊತೆಯಲ್ಲಿರುತ್ತಾನೆ! ಕಳ್ಳರು, ಸುಳ್ಳರು, ಭ್ರಷ್ಟರು, ರೌಡಿಗಳು ಎಲ್ಲರಿಗೂ ಒಂದೇ ಸೂರು ಅದು ಬಿಜೆಪಿ. ಪೊಲೀಸರು ಹುಡುಕುತ್ತಿದ್ದ ರೌಡಿಯ ಜೊತೆಗೆ ನಿಮ್ಮ ನಾಯಕರಿಗೆ ಏನು ಕೆಲಸ? ಆತನ ಬಂಧನ ಆಗದಿರುವ ಹಿಂದೆ ಬಿಜೆಪಿ ಕೈವಾಡವಿದೆಯೇ? ಪೊಲೀಸರಿಗಿಂತ ರೌಡಿಗಳೇ ಪ್ರಭಾವಿಗಳಾದರೆ? ಎಂದು ವಾಗ್ದಾಳಿ ನಡೆಸಿದೆ.

Leave a Reply

Your email address will not be published. Required fields are marked *

You may have missed

error: Content is protected !!