August 14, 2026

ಬಂಟ್ವಾಳ: ಅಕ್ರಮ ಕಸಾಯಿ ಖಾನೆ ಮೇಲೆ ಪೊಲೀಸರ ದಾಳಿ – ಬೈಕ್ ಜಪ್ತಿ, ಓರ್ವ ಅರೆಸ್ಟ್

0
IMG-20221128-WA0025.jpg

ಬಂಟ್ವಾಳ: ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಡವರಕಲ್ಲು ಸಮೀಪದ ಕುದ್ರು ಎಂಬಲ್ಲಿ ಅಕ್ರಮ ಕಸಾಯಿ ಖಾನೆ ಮೇಲೆ ಪುಂಜಾಲಕಟ್ಟೆ ಪೊಲೀಸರು ಸೋಮವಾರ ದಾಳಿ ನಡೆಸಿದ್ದಾರೆ.

ಪೊಲೀಸರು ದನದ ಮಾಂಸ, 1 ಲಕ್ಷ ಮೌಲ್ಯದ ಬೈಕ್ ಜಪ್ತಿ ಮಾಡಿದ್ದು, ಸ್ಥಳೀಯ ನಿವಾಸಿ ಇಸ್ಮಾಯಿಲ್ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿ ಇಸ್ಮಾಯಿಲ್ ಮನೆ ಹಿಂಭಾಗದ ಕಟ್ಟಡದಲ್ಲಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿದೆ ಎಂಬ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಪುಂಜಾಲಕಟ್ಟೆ ಠಾಣೆ ಎಸ್‌ಐ ಸುತೇಶ್ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!