ಡಿ.3 ರಂದು ತುಂಬೆ ಮೊಯ್ದೀನ್ ಎಜುಕೇಶನ್ ಟ್ರಸ್ಟ್ ನ ಅಧೀನದ ತುಂಬೆ ಪದವಿ ಪೂರ್ವ ಕಾಲೇಜ್ ನಲ್ಲಿ ವಾರ್ಷಿಕೋತ್ಸವ: ಸಭಾ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ
ಬಂಟ್ವಾಳ: ತುಂಬೆ ಮೊಯ್ದೀನ್ ಎಜುಕೇಶನ್ ಟ್ರಸ್ಟ್ ನ ಅಧೀನದಲ್ಲಿರುವ ತುಂಬೆ ಪದವಿ ಪೂರ್ವ ಕಾಲೇಜ್, ಪ್ರೌಢ ಶಾಲೆ, ಸೆಂಟ್ರಲ್ ಸ್ಕೂಲ್ ನಲ್ಲಿ 34ನೇ ವರ್ಷದ ಶಾಲಾ ವಾರ್ಷಿಕೋತ್ಸವ ಡಿಸೆಂಬರ್ 3ರಂದು ತುಂಬೆ ಪದವಿ ಪೂರ್ವ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮೊಯ್ದೀನ್ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಬಿ.ಅಬ್ದುಲ್ ಸಲಾಂ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪಿಯು ಕಾಲೇಜಿನ ಪ್ರಾಶುಂಪಾಲರಾದ ಮೊಹಮ್ಮದ್ ಸದಕತ್ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ, ವಕೀಲೆ ಶೈಲಜ ರಾಜೇಶ್, ಮಾಜಿ ಎಂಆರ್‌ಪಿಎಲ್ ಮ್ಯಾನೇಜರ್ ಸದಾಶಿವ ಡಿ ತುಂಬೆ ವಹಿಸಲಿದ್ದಾರೆ.
ಪದವಿ ಪೂರ್ವ ಕಾಲೇಜ್, ಪೌಢಶಾಲಾ ಮತ್ತು ಸೆಂಟ್ರಲ್ ಸ್ಕೂಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮದೊಂದಿಗೆ ಪ್ರಾರಂಭಗೊಳ್ಳಲಿದೆ. ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ 1.30 ಗಂಟೆಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮ ಪ್ರತಿದಿನ ಯೂಟ್ಯೂಬ್ ನಲ್ಲಿ ನೇರಪ್ರಸಾರಗೊಳ್ಳಲಿದೆ.





