ಸಿದ್ದಕಟ್ಟೆ: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕಿ, ಪೋಷಕರಿಗೆ 26 ಸಾವಿರ ರೂ. ದಂಡ
ಬಂಟ್ವಾಳ: ಸಿದ್ದಕಟ್ಟೆಯಲ್ಲಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ಸ್ಕೂಟರ್ ಚಲಾಯಿಸಲು ನೀಡಿದ ಆಕೆಯ ತಾಯಿಗೆ ಬಂಟ್ವಾಳ ನ್ಯಾಯಾಲಯ 26 ಸಾವಿರ ರೂ. ದಂಡ ವಿಧಿಸಿ ಆದೇಶ ನೀಡಿದೆ.
ಕಳೆದ ಆಗಸ್ಟ್‌ನಲ್ಲಿ ಸಿದ್ದಕಟ್ಟೆಯಲ್ಲಿ ಸ್ಕೂಟರ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸಿದ ಎಎಸ್‌ಐ ವಿಜಯ್ ಅವರು ನೋಟಿಸ್ ಜಾರಿ ಮಾಡಿದ್ದರು.
ಇದೀಗ ವಿಚಾರಣೆ ನಡೆಸಿದ ನ್ಯಾಯಾಲಯ, ಅಪಘಾತದ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ಅಪ್ರಾಪ್ತ ಬಾಲಕಿಯ ತಾಯಿಗೆ ದಂಡ ವಿಧಿಸಿ ಆದೇಶಿಸಿದೆ.