August 12, 2026

ಸುಳ್ಯ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ

0
Screenshot_2022-11-29-14-40-40-16_680d03679600f7af0b4c700c6b270fe7.jpg

ಸುಳ್ಯ: ವಿಳಾಸ ಕೇಳುವ ನೆಪದಲ್ಲಿ ಒಬ್ಬಂಟಿ ವೃದ್ದೆಯ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ನ.28 ರಂದು ಬೆಳಿಗ್ಗೆ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ ಬಳಿ ನಡೆದಿದೆ.

ಚಿನ್ನ ಕಳೆದುಕೊಂಡ ಮಹಿಳೆ ಬೈತಡ್ಕ ನಿವಾಸಿ ದಿವಂಗತ ಶಿವರಾಯರವರ ಪತ್ನಿ ಕಮಲ (64 )ಎಂದು ತಿಳಿದುಬಂದಿದೆ.

ಚಿನ್ನದ ಸರವು ಒಟ್ಟು 26 ಗ್ರಾಂ ಇದ್ದು ಅದರಲ್ಲಿ 13 ಗ್ರಾಂ ನಷ್ಟು ಚಿನ್ನದ ಸರವನ್ನು ಕಳ್ಳನು ಕಿತ್ತುಕೊಂಡು ಹೋಗಿರುವುದಾಗಿದ್ದು, ಮನೆಯ ಒಳಗೆ ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಹಾಕಿ ಕುತ್ತಿಗೆಯಲ್ಲಿದ್ದ ಚಿನ್ನದ ಸರದ ತುಂಡನ್ನು ಕಿತ್ತುಕೊಂಡು ಹೋಗಿರುವ ಕಳ್ಳನನ್ನು ಮತ್ತು ನನ್ನ ಚಿನ್ನದ ಸರವನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ

ಸುಳ್ಯ ಪೊಲೀಸರು ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!