August 12, 2026

ಕೇರಳ ಮೂಲದ ಯುವತಿ ಮೇಲೆ ಗ್ಯಾಂಗ್ ರೇಪ್: ಇಬ್ಬರ ಬಂಧನ

0
IMG-20221129-WA0088.jpg

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಗ್ಯಾಂಗ್ ರೇಪ್ ನಡೆದಿರುವುದು ಬೆಳಕಿಗೆ ಬಂದಿದೆ.

ಎಲೆಕ್ಟ್ರಾನಿಕ್ ಸಿಟಿ ನೀಲಾದ್ರಿ ನಗರದ ಬಳಿ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಯುವತಿ ಮೇಲೆ ಇಬ್ಬರು ಯುವಕರು ರೇಪ್ ಮಾಡಿದ್ದಾರೆ.

ರ‍್ಯಾಪಿಡೋ ಬೈಕ್ ಪಿಕಪ್ ಮಾಡೋ ಸವಾರ ಹಾಗೂ ಆತನ ಸ್ನೇಹಿತನಿಂದ ಅತ್ಯಾಚಾರ ನಡೆದಿದೆ. ಸದ್ಯ ಯುವತಿ ದೂರಿನ ಮೇರೆಗೆ ಗ್ಯಾಂಗ್ ರೇಪಿಸ್ಟ್ ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಯುವತಿಯನ್ನು ರ‍್ಯಾಪಿಡೋ ಯುವಕ ಡ್ರಾಪ್ ಪಾಯಿಂಟ್‍ನಲ್ಲಿ ಬಿಡಲಿಲ್ಲ.

ಅಲ್ಲದೆ ಇದೇ ಸಂದರ್ಭದಲ್ಲಿ ಆತ ತನ್ನ ಸ್ನೇಹಿತನನ್ನು ಕೂಡ ಸ್ಥಳಕ್ಕೆ ಕರೆಸಿಕೊಳ್ಳುತ್ತಾನೆ. ನಂತರ ಇಬ್ಬರು ನೀಲಾದ್ರಿ ನಗರದ ತನ್ನ ರೂಮ್‍ಗೆ ಕರೆದೊಯ್ದು ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ್ದಾರೆ.

ಪ್ರಜ್ಞೆ ಬಂದ ಬಳಿಕ ಯುವತಿಯನ್ನು ಬಿಟ್ಟು ಕಳುಹಿಸಿದ್ದಾರೆ. ಅಲ್ಲದೆ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!