March 20, 2026

ತಲಪಾಡಿ: ಲಾರಿ ಢಿಕ್ಕಿ: ಪಾದಚಾರಿ ಮೃತ್ಯು: ತಿಂಗಳ ಅಂತರದಲ್ಲಿ ಮೂವರು ಸಹೋದರರ ಸಾವು

0
IMG-20221129-WA0039.jpg

 
ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ(55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ.

ತಿಂಗಳ ಅಂತರದಲ್ಲಿ ಸಹೋದರರ ನಡುವೆ ಸಂಭವಿಸಿದ ಮೂರನೇಯ ಸಾವಾಗಿದೆ.

ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್ ಇದ್ದ ಲಾರಿ ವಸಂತ್ ಅವರಿಗೆ ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರ ಗಾಯಗೊಂಡ ಅವರನ್ನು ಟೋಲ್ ಸಿಬ್ಬಂದಿ ಸೇರಿ, ತಮ್ಮದೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಮಂಗಳೂರು ಸಂಚಾರಿ ಠಾಣಾ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದುಕೊಂಡು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಸಂತ್ ರೈ ಅವರು ಕಳೆದ 10 ವರ್ಷಗಳಿಂದ ಕಾಸರಗೋಡಿನ ಕೆಎಸ್ ಆರ್ ಟಿಸಿ ಡಿಪೋದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಶಿರಿಯಾ ದೇವಸ್ಥಾನದಲ್ಲಿ ನಡೆದಿದ್ದ ಸಂಬಂಧಿಕರ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡು ಕೋಟೆಕಾರು ತೆರಳಲು ತಲಪಾಡಿವರೆಗೆ ಬಸ್ಸಿನಲ್ಲಿ ಬಂದು ಇಳಿದಿದ್ದರು. ಅಲ್ಲಿಂದ ಕೋಟೆಕಾರು ಕಡೆಗೆ ತೆರಳಲು ಮಂಗಳೂರು ಸಿಟಿ ಬಸ್ಸನ್ನೇರಲು ರಾ.ಹೆ.ಯನ್ನು ದಾಟುವಾಗ ಘಟನೆ ಸಂಭವಿಸಿದೆ. ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!