March 20, 2026

ಕಟ್ಟಡಕ್ಕೆ ಅಗ್ನಿ ಆಕಸ್ಮಿಕ: ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ ಆರು ಮಂದಿ ಸಜೀವದಹನ

0
image_editor_output_image-668936142-1669785488971.jpg

ಫಿರೋಜಾಬಾದ್: ಕಟ್ಟಡವೊಂದರಲ್ಲಿ ಅಗ್ನಿ ಆಕಸ್ಮಿಕ ಉಂಟಾಗಿ ಮೂವರು ಮಕ್ಕಳು ಸಹಿತ ಒಂದೇ ಕುಟುಂಬದ ಆರು ಮಂದಿ ಸಜೀವದಹನವಾದ ಘಟನೆ ಉತ್ತರಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ನಡೆದಿದೆ.

ಎಲೆಕ್ಟ್ರಾನಿಕ್ಸ್ ಮತ್ತು ಆಭರಣ ಅಂಗಡಿಯ ಮಾಲಕ ರಾಮನ್ ಕುಮಾರ್ ಮತ್ತು ಅವರ ಕುಟುಂಬ ಸದಸ್ಯರು ಮೃತಪಟ್ಟವರು. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ ಎಂದು ತಿಳಿದು ಬಂದಿದೆ.

ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಂತೆ ಮನೆಯೊಳಗಿದ್ದವರು ಹೊರ ಬರಲು ಪ್ರಯತ್ನಿಸಿದರಾದರೂ ಅದು ಸಾಧ್ಯವಾಗದೆ ಆರು ಮಂದಿ ಸಜೀವದಹನಗೊಂಡಿದ್ದಾರೆ.

ಮಾಹಿತಿ ತಿಳಿದ ತತ್‌ಕ್ಷಣ ಆಗ್ರಾ, ಇಟಾಹ್, ಮೈನ್ಪುರಿ ಮತ್ತು ಫಿರೋಜಾಬಾದ್‌ನ ಸುಮಾರು 18 ಅಗ್ನಿಶಾಮಕ ದಳದ ಸಿಬಂದಿ ಹಾಗೂ 12 ಠಾಣೆಗಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು ಎಂದು ಫಿರೋಜಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ತಿವಾರಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!