August 14, 2026

ಮದುವೆ ನಿಶ್ಚಯವಾಗಿದ್ದ  ಹುಡುಗನ ಜೊತೆ ತೆರಳಿದ್ದ ಯುವತಿ ಅನುಮಾನಾಸ್ಪದವಾಗಿ ಸಾವು

0
image_editor_output_image-2081475385-1669785870135.jpg

ಹಾಸನ: ಮದುವೆ ನಿಶ್ಚಯವಾಗಿದ್ದ ಹುಡುಗನ ಜೊತೆ ತೆರಳಿದ್ದ ಅಪ್ರಾಪ್ತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿಯಲ್ಲಿ ನಡೆದಿದೆ.

ಕೂಡ್ಲೂರು ಗ್ರಾಮದ ದಿನೇಶ್ ಜೊತೆ 2 ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಮದುವೆ ನಿಶ್ಚಯವಾಗಿತ್ತು. ಆಕೆಗೆ ಇನ್ನೂ 16 ವರ್ಷವಾಗಿದ್ದು ಮನೆಯವರೇ ಮದುವೆ ನಿಶ್ಚಯ ಮಾಡಿದ್ದರು. ದಿನೇಶ್ ಆಕೆಯನ್ನು ನವೆಂಬರ್ 29 ರಂದು ರಾಮನಾಥಪುರ ಷಷ್ಠಿ ಜಾತ್ರೆಗೆಂದು ಕರೆದೊಯ್ದಿದ್ದ. ಮಧ್ಯಾಹ್ನ 2:30 ರ ವೇಳೆಗೆ ದಿನೇಶ್ ಆಕೆಯನ್ನು ಕರೆದೊಯ್ದಿದ್ದು 4 ಗಂಟೆ ವೇಳೆಗೆ ಆಕೆಯ ಪೋಷಕರಿಗೆ ಕರೆ ಮಾಡಿ, ನಿಮ್ಮ ಮಗಳು ವಿಷ ಕುಡಿದಿದ್ದಾಳೆ ಎಂದು ತಿಳಿಸಿದ್ದಾನೆ.

ಆಕೆಯನ್ನು ಬಳಿಕ ದಿನೇಶ್ ಕುಟುಂಬದವರು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾರೆ. ಆದರೆ ಆಕೆ ಆಸ್ಪತ್ರೆಗೆ ದಾಖಲಾಗುವ ವೇಳೆಗೆ ಮೃತಪಟ್ಟಿದ್ದಾಳೆ.

ಇದೇ ವೇಳೆ ದಿನೇಶ್ ಕೂಡಾ ವಿಷ ಸೇವಿಸಿರುವುದು ತಿಳಿದುಬಂದಿದ್ದು, ಆತನಿಗೆ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗಳ ಸಾವಿನ ಬಗ್ಗೆ ಅನುಮಾನಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!