August 14, 2026

ಪಿಎಫ್ಐ ನಿಷೇಧ ಹಿನ್ನೆಲೆ ತೀರ್ಫು ಪ್ರಕಟ: ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಹೈಕೋರ್ಟ್

0
Screenshot_2022-11-29-13-18-31-95_680d03679600f7af0b4c700c6b270fe7.jpg

ಬೆಂಗಳೂರು: ಪಾಪುಲರ್ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧಿಸಿ ಕೇಂದ್ರ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಪಿಎಫ್ಐ ನಿಷೇಧ ಆದೇಶ ಪ್ರಶ್ನಿಸಿ ‌ಪಿಎಫ್ಐ ಮುಖಂಡ ನಾಸಿರ್ ಅಲಿ‌ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ಮಾಡಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಇಂದು ಅರ್ಜಿಯನ್ನು ವಜಾಗೊಳಿಸಿದ್ದು, ಕೇಂದ್ರದ ತೀರ್ಪನ್ನು ಎತ್ತಿ ಹಿಡಿದಿದೆ.

ಭಯೋತ್ಪಾದನಾ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ ಎನ್ನುವ ಆರೋಪದ ಮೇಲೆ ಪಾಪ್ಯುಲರ್‌ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಸಪ್ಟೆಂಬರ್ 28ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ನಾಸಿರ್ ಅಲಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಪರ ವಾದ ಮಂಡಿಸಿದ ವಕೀಲ ಜಯಕುಮಾರ್ ಎಸ್.ಪಾಟೀಲ್ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಆದರೆ ಪಿಎಫ್ಐ ಕಾನೂನು ಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ. ತಕ್ಷಣದ ಬ್ಯಾನ್ಗೆ ಪ್ರತ್ಯೇಕ ಕಾರಣ ನೀಡಬೇಕಿತ್ತು. ವಾದ ಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ ಎಂದು ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!