ಮಂಗಳೂರು: ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣದ ಆರೋಪಿ ಶಾರೀಕ್ ಖಾತೆಗೆ ವಿದೇಶದಿಂದ ಹಣ ವರ್ಗಾವಣೆ
ಮಂಗಳೂರು: ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಟೋಟ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಂಕಿತ ಉಗ್ರ ಮಹಮ್ಮದ್ ಶಾರೀಕ್‌ನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಆತನ ಖಾತೆಗಳಿಗೆ ವಿದೇಶಗಳಿಂದ ಹಣ ವರ್ಗಾವಣೆಯಾಗಿರುವುದು ತಿಳಿದು ಬಂದಿದೆ.
ಶಾರೀಕ್ ಡಾರ್ಕ್‌ವೆಬ್ ಮೂಲಕ ಖಾತೆ ತೆರೆದಿದ್ದು, ವಿದೇಶಗಳಿಂದ ವರ್ಗಾವಣೆಯಾಗುತ್ತಿದ್ದ ಹಣವನ್ನು ರೂಪಾಯಿಗೆ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದ ಎನ್ನಲಾಗಿದೆ.
ಇನ್ನು ಮೈಸೂರಿನಲ್ಲಿ ಅನೇಕ ಮಂದಿಯ ಬ್ಯಾಂಕ್ ಖಾತೆಗೆ ಹಣ ಹಾಕಿಸಿದ್ದ ಎಂಬ ಮಾಹಿತಿ ಲಭಿಸಿದ್ದು, ಅದರಂತೆ ಪೊಲೀಸರು ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.






