ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧ ಮೃತ್ಯು
ಹಾಸನ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಾಸನ ಜಿಲ್ಲೆಯ ಯೋಧ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೆಚ್.ಬಿ ಚನ್ನಬಸಪ್ಪ (54) ಮೃತ ಯೋಧ.
ಚನ್ನಬಸಪ್ಪ ಹಾಸನ ಜಿಲ್ಲೆ, ಆಲೂರು ತಾಲೂಕಿನ ಚಿಕ್ಕಕಣಗಾಲು-ಹೊಸಳ್ಳಿ ಗ್ರಾಮದವರು. ನವೆಂಬರ್ 19 ರಂದು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಬೆಂಗಳೂರಿನ ಹುಣಸಮಾರನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚನ್ನಬಸಪ್ಪ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಾವನ್ನಪ್ಪಿದ್ದಾರೆ.




