March 20, 2026

ದತ್ತ ಪೀಠಕ್ಕೆ ಹೊರಟಿದ್ದ ಬಸ್ಸಿನ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ

0
IMG-20211114-WA0008.jpg

ಕೋಲಾರ: ದತ್ತ ಪೀಠಕ್ಕೆ ಹೊರಟಿದ್ದ ಬಸ್ಸಿನ ಮೇಲೆ ದುಷ್ಕರ್ಮಿಗಳ ತಂಡವೊಂದು ಕಲ್ಲು ತೂರಾಟ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ.

ಶನಿವಾರ ರಾತ್ರಿ ಕೋಲಾರದ ಶ್ರೀರಾಮ ಸೇನೆ ಕಾರ್ಯಕರ್ತರು ದತ್ತಮಾಲೆ ಧರಿಸಿ ದತ್ತ ಪೀಠಕ್ಕೆ ಹೊರಟಿದ್ದ ವೇಳೆ ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಾ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು. ಶ್ರೀರಾಮ ಸೇನೆ ಕಾರ್ಯಕರ್ತರು/ದತ್ತ ಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!