August 14, 2026

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಇಲ್ಲ: ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ

0
Screenshot_2022-12-01-13-40-45-07_680d03679600f7af0b4c700c6b270fe7.jpg

ಬೆಂಗಳೂರು: ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾಪ ಅಥವಾ ಕಡತ ಸರಕಾರದ ಮುಂದೆ ಇಲ್ಲ ಎಂದು ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈಗಾಗಲೇ ಸರಕಾರ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಿದೆ ಎನ್ನುವ ಸುದ್ದಿಗಳು ಸತ್ಯಕ್ಕೆ ದೂರವಾಗಿವೆ. ಕಾಲೇಜುಗಳ ಪ್ರಾರಂಭದ ಬಗ್ಗೆ ವಕ್ಸ್ ಬೋರ್ಡ್ ಅಧ್ಯಕ್ಷರ ಹೇಳಿಕೆ ಅವರ ವೈಯಕ್ತಿಕ ಹೇಳಿಕೆಯಾಗಿದೆ.

ಈ ಕುರಿತು ಎದ್ದಿರುವ ಊಹಾಪೋಹಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ವಕ್ಸ್ ಬೋರ್ಡ್ ಅಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!