March 21, 2026

ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? – ಕಾಂಗ್ರೆಸ್ ಪ್ರಶ್ನೆ

0
IMG-20221201-WA0030.jpg

ಬೆಂಗಳೂರು: ನಮ್ಮ ಅವಧಿಯಲ್ಲಿ ಸಮಾಜ ಕಂಟಕರಾಗಿದ್ದ ರೌಡಿಗಳ ಎನ್ಕೌಂಟರ್‌ಗಳಾಗಿದ್ದವು, ರೌಡಿಗಳನ್ನು ಮಟ್ಟಹಾಕಲು ಪೊಲೀಸರಿಗೆ ಸ್ವತಂತ್ರ ನೀಡಲಾಗಿತ್ತು.ಆದರೆ ಈಗ ಬಿಜೆಪಿಗರ ಸಖ್ಯದಿಂದ ರೌಡಿಗಳು ಪೊಲೀಸರೆದುರು ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಈಗ ಬಿಜೆಪಿಗರ ಸಖ್ಯದಿಂದ ರೌಡಿಗಳು ಪೊಲೀಸರೆದುರು ಎದೆ ಉಬ್ಬಿಸಿಕೊಂಡು ನಡೆಯುತ್ತಿದ್ದು, ಪೊಲೀಸರೇ ರೌಡಿಗಳೆದುರು ತಲೆ ತಗ್ಗಿಸಿ ನಿಲ್ಲುವಂತೆ ಅವರ ನೈತಿಕ ಸ್ಥೈರ್ಯ ಕುಸಿದಿದೆ ಎಂದಿದೆ.

ಇನ್ನು ರೌಡಿಗಳಿಗೂ ಬಿಜೆಪಿ ನಾಯಕರಿಗೂ ಏನು ಸಂಬಂಧ? ಏನು ವ್ಯವಹಾರ? ಯಾವ ನಂಟು? ಸೈಲೆಂಟ್ ಸುನೀಲ, ಫೈಟರ್ ರವಿ, ಬೆತ್ತನಗೆರೆ ಶಂಕರ ಬಿಜೆಪಿ ಜೊತೆಗೆ ಗುರುತಿಸಿಕೊಂಡ ನಂತರ ವಿಲ್ಸನ್ ಗಾರ್ಡನ್ ನಾಗ ಎಂಬ ರೌಡಿ ಶೀಟರ್ ನಿನ್ನೆ ರಾತ್ರಿ ಸಚಿವ ವಿ.ಸೋಮಣ್ಣ ಮನೆಗೆ ಬಂದಿದ್ದೇಕೆ? ಆತನೂ ಬಿಜೆಪಿ ರೌಡಿ ಮೋರ್ಚಾ ಸೇರುವ ಸಂಭವವಿದೆಯೇ? ಎಂದು ಪ್ರಶ್ನಿಸಿದೆ.

ಮೊದಲೆಲ್ಲ ರೌಡಿ ಶೀಟರ್‌ಗಳು ಪೊಲೀಸರೆದುರು ಪರೇಡ್ ನಡೆಸುತ್ತಿದ್ದರು ಈಗ ಬಿಜೆಪಿ ಕಚೇರಿ ಮುಂದೆ ಪಕ್ಷ ಸೇರಲು ಪರೇಡ್ ನಡೆಸಲು ಸಜ್ಜಾಗಿದ್ದಾರೆ! ರೌಡಿಗಳೊಂದಿಗೆ ಬಿಜೆಪಿಗರ ಬಾಂಧವ್ಯ ಹೊರಬರುತ್ತಿರುವಾಗ ಮತ್ತೊಬ್ಬ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸಚಿವ ಸೊಮ್ಮಣ್ಣನವರ ಮನೆಗೆ ಭೇಟಿ ನೀಡಿದ್ದು ಬಿಜೆಪಿಯ ರೌಡಿ ಮೋರ್ಚಾಗೆ ಶಕ್ತಿ ನೀಡವುದಕ್ಕಾ ಎಂದು ಪ್ರಶ್ನೆ ಮಾಡಿದೆ.

Leave a Reply

Your email address will not be published. Required fields are marked *

You may have missed

error: Content is protected !!