September 19, 2024

ಮೈಸೂರು: ಚಿರತೆ ದಾಳಿಗೆ ವಿದ್ಯಾರ್ಥಿನಿ ಮೃತ್ಯು

0

ಮೈಸೂರು: ತಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ವಿದ್ಯಾರ್ಥಿನಿಯೊಬ್ಬರು ಚಿರತೆ ದಾಳಿಗೆ ಗುರುವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೇಘನಾ(20) ಚಿರತೆ ದಾಳಿಗೆ ಮೃತಪಟ್ಟ ಯುವತಿ.

ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ಶೌಚಾಲಯಕ್ಕೆ ಹೋಗಲು ಹೊರ ಬಂದ ಮೇಘನಾ ಮೇಲೆ‌ ಚಿರತೆ ದಾಳಿ ಮಾಡಿದ್ದು, ಮುಖ ಹಾಗೂ ಕತ್ತಿನ ಭಾಗವನ್ನು ಕಚ್ಚಿ ಗಾಯಗೊಳಿಸಿದೆ.

ಇನ್ನು ಚಿರತೆ ದಾಳಿಗೊಳಗಾದ ಮೇಘನಾ ಚೀರಾಟಕ್ಕೆ ಪೋಷಕರು ಓಡಿಬಂದಿದ್ದು, ಈ ವೇಳೆ ತಕ್ಷಣ ಚಿರತೆ ಪರಾರಿಯಾಗಿದೆ. ಬಳಿಕ ಮೇಘನಾ ಅವರನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!