March 22, 2026

ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆ ಇಲ್ಲ: ಸಿಎಂ ಇಬ್ರಾಹಿಂ

0
image_editor_output_image769579871-1670042360180.jpg

ಕಲಬುರಗಿ: ಮುಸ್ಲಿಂ ವಿದ್ಯಾರ್ಥಿಗಳಿಗೆ ವಕ್ಫ್‌ ಬೋರ್ಡ್‌ನಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಅಭಿಪ್ರಾಯಪಟ್ಟರು.

ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ಬೋರ್ಡ್‌ನಿಂದ(waqf Board) ಕಾಲೇಜು ಮಾಡಬಾರದು ಅಂತೇನಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಾಲೇಜು ಮಾಡುವುದು ಸರಿಯಲ್ಲ. ಎಲ್ಲ ಧರ್ಮದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ಅಧಿಕಾರವಿದೆ. ಕೇವಲ ಒಂದೇ ಧರ್ಮದ ವಿದ್ಯಾರ್ಥಿಗಳಿಗೆ ಕಾಲೇಜು ಸ್ಥಾಪನೆ ಎಂದರೆ ನಾನೇ ಮೊದಲು ಹೋರಾಟಕ್ಕೆ ಇಳಿಯುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!