ಬಂಟ್ವಾಳ: ಅಕ್ರಮ ಸಾಗಾಟ ಮಾಡುತ್ತಿದ್ದ ಗೋವುಗಳ ರಕ್ಷಣೆ
ಬಂಟ್ವಾಳ: ಬಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಸಾಗಾಟ ಮಾಡುತ್ತಿದ್ದ ಗೋವುಗಳನ್ನು ರಕ್ಷಿಸಿ, ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಸಜೀಪ ಕಂದೂರಿನಲ್ಲಿ ನಡೆದಿದೆ.
ಆಪೆ ರಿಕ್ಷಾದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಬಜರಂಗದಳ ಕಲ್ಲಡ್ಕ ಪ್ರಖಂಡದ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿದ್ದು, ಸಾಗಿಸಲಾಗುತ್ತಿದ್ದ ಒಂದು ಜಾನುವಾರುವನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ..




