February 4, 2026

ತೃಣಮೂಲ ಕಾಂಗ್ರೆಸ್ ಮುಖಂಡನ ಮನೆಯಲ್ಲಿ ಬಾಂಬ್ ಸ್ಫೋಟ: ಮೂವರು ಸಾವು

0
image_editor_output_image-596132280-1670055558828.jpg

ಕೋಲ್ಕತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ)ನ ಮುಖಂಡನ ಮನೆಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ಪಶ್ಚಿಮಬಂಗಾಳದ ಮೇದಿನಿಪುರ್ ನಲ್ಲಿ ಶುಕ್ರವಾರ ನಡೆದಿದೆ.

ನರಾಯ್ ಬಿಲಾ ಗ್ರಾಮದಲ್ಲಿರುವ ತೃಣಮೂಲ ಕಾಂಗ್ರೆಸ್ ನ ಬೂತ್ ಅಧ್ಯಕ್ಷನ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ಸ್ಫೋಟದಿಂದಾಗಿ ಮನೆ ಧ್ವಂಸಗೊಂಡಿರುವುದಾಗಿ ವರದಿ ತಿಳಿಸಿದೆ.

ಬಾಂಬ್ ಸ್ಫೋಟದ ಕಾರಣ ಇನ್ನಷ್ಟೇ ತನಿಖೆಯಿಂದ ತಿಳಿದು ಬರಬೇಕಾಗಿದೆ. ಆದರೆ ಸ್ಫೋಟದ ತೀವ್ರತೆ ಗಂಭೀರವಾಗಿದ್ದು, ಮಣ್ಣಿನ ಮನೆಯ ಗೋಡೆ, ಮೇಲ್ಛಾವಣಿ ಧ್ವಂಸಗೊಂಡಿರುವುದಾಗಿ ಪಿಟಿಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

Leave a Reply

Your email address will not be published. Required fields are marked *

error: Content is protected !!