ಬಂಟ್ವಾಳ: ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ
ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ.
ಶಿವಕುಮಾರ್ ಅವಿವಾಹಿತರಾಗಿದ್ದು, ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ನಿನ್ನೆ ದೊಡ್ಡಮ್ಮ ನೆಂಟರ ಮನೆಗೆ ತೆರಳಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





