August 14, 2026

ಕಾರ್ಕಳ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

0
IMG-20221204-WA0004.jpg

ಮಾಳ: ವ್ಯಕ್ತಿಯೊಬ್ಬರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳ ಗ್ರಾಮದ ಮಲ್ಲಾರಿನಲ್ಲಿ ನಡೆದಿದೆ.

ಕೃಷ್ಣ ಶೆಟ್ಟಿ (65) ಆತ್ಮಹತ್ಯೆ ಮಾಡಿಕೊಂಡವರು.

ಡಿಸೆಂಬರ್‍ 2ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!