April 26, 2024

ಪಾರಿವಾಳ ಹಿಡಿಯುವಾಗ ಕರೆಂಟ್ ಶಾಕ್: ಓರ್ವ ಬಾಲಕ ಮೃತ್ಯು, ಮತ್ತೋರ್ವ ಗಂಭೀರ

0

ಬೆಂಗಳೂರು: 3 ದಿನಗಳ ಹಿಂದೆ ಕರೆಂಟ್ ಶಾಕ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರಲ್ಲಿ ಒಬ್ಬ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಬಾಲಕ ಸುಪ್ರೀತ್ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾನೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಈ ದುರ್ಘಟನೆ ನಡೆದಿದೆ. ಡಿಸೆಂಬರ್ 1 ರಂದು ಶಾಲೆಯಿಂದ ಮನೆಗೆ ಬಂದಿದ್ದ ಬಾಲಕರಿಬ್ಬರು ಮನೆಯ ಮಹಡಿ ಮೇಲಿದ್ದ ಪಾರಿವಾಳವನ್ನು ಹಿಡಿಯಲು ಹೋಗಿದ್ದರು.

ಈ ವೇಳೆ ಕಬ್ಬಿಣದ ರಾಡ್‌ನಿಂದ ಹೈಟೆನ್ಷನ್ ವಯರ್ ಅನ್ನು ಬಾಲಕರು ಮುಟ್ಟಿದ್ದರು. ಘಟನೆಯ ತೀವ್ರತೆ ಎಷ್ಟಿತ್ತು ಎಂದರೆ ಮನೆಯಲ್ಲಿದ್ದ ಎಲೆಕ್ಟ್ರಿಕ್ ಉಪಕರಣಗಳೆಲ್ಲವೂ ಸ್ಫೋಟಗೊಂಡಿತ್ತು.

Leave a Reply

Your email address will not be published. Required fields are marked *

error: Content is protected !!