August 14, 2026

ಶಿವಮೊಗ್ಗದ ಪ್ರಮುಖರು ಬಿಜೆಪಿಗೆ ಸೇರ್ಪಡೆ

0
IMG-20221204-WA0011.jpg

ಶಿವಮೊಗ್ಗ: ಸೊರಬ, ಶಿಕಾರಿಪುರ ಬಳಿಕ ಸಾಗರ ಹಾಗೂ ಶಿವಮೊಗ್ಗ ಕ್ಷೇತ್ರದ ಪ್ರಮುಖರು ಬಿಜೆಪಿಗೆ ಸೇರ್ಪಡೆಯಾಗಿದ್ದು, ಚುನಾವಣಾ ತಂತ್ರಗಾರಿಕೆ ಅಧಿಕೃತವಾಗಿ ಆರಂಭವಾಗಿದೆ.

ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಗರದ ಕೆ.ಎಸ್.ಪ್ರಶಾಂತ್ ಹಾಗೂ ಖ್ಯಾತ ಮಕ್ಕಳ ತಜ್ಞ ಡಾ ಧನಂಜಯ್ ಸರ್ಜಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಈ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಇವರುಗಳು ಬಿಜೆಪಿ ಸೇರ್ಪಡೆಯಾದರು. ಕಾರ್ಯಕ್ರಮದಲ್ಲಿ ಶಾಸಕರಾದ ಆಯನೂರು ಮಂಜುನಾಥ್, ಡಿ.ಎಸ್.ಅರುಣ್, ಎಸ್.ರುದ್ರೇಗೌಡ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!