August 14, 2026

ಬಂಟ್ವಾಳ: ಆಟೋ ರಿಕ್ಷಾ ಹೆದ್ದಾರಿಗೆ ಪಲ್ಟಿ: ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ

0
image_editor_output_image1081246998-1670210415137

ಬಂಟ್ವಾಳ: ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ತುಂಬೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕ ಇಬ್ಬರೇ ಇದ್ದ ಬಗ್ಗೆ ಸ್ಥಳೀಯರು ತಿಳಿಸಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡರೆ ಪ್ರಯಾಣಿಕನಿಗೂ ಗಾಯವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.  ಇನ್ನು ಗಾಯಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಳುಗಳ ಸ್ಪಷ್ಟವಾದ ಮಾಹಿತಿ ಇನ್ನಷ್ಠೇ ಲಭ್ಯವಾಗಬೇಕಿದೆ

Leave a Reply

Your email address will not be published. Required fields are marked *

You may have missed

error: Content is protected !!