August 14, 2026

ಬೆಳ್ತಂಗಡಿ: ಆಂಬುಲೆನ್ಸ್ ಪಲ್ಟಿ: ವೈದ್ಯ ಸೇರಿದಂತೆ ಮೂವರಿಗೆ ಗಾಯ

0
IMG-20221205-WA0004.jpg

ಬೆಳ್ತಂಗಡಿ: ಬೆಳ್ತಂಗಡಿ ಸೇತುವೆ ಬಳಿ ನಿಯಂತ್ರಣ ತಪ್ಪಿದ ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆಂಬುಲೆನ್ಸ್ ಸೇತುವೆ ಬದಿಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ.

ಅವಘಢದಿಂದ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ.

ಇನ್ನು ಡಾ.‌‌ನಿತಿನ್ ಅವರಿಗೆ ತಲೆಗೆ ಗಾಯ ಹಾಗೂ ಕೈ ಮೂಳೆ‌ ಮುರಿತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಾದ ಇನ್ನಿಬ್ಬರು ಆಸ್ಪತ್ರೆಯ ಕ್ಷ ಕಿರಣ ತಜ್ಞ ರಿತೇಶ್ (24) ಮತ್ತು ಲ್ಯಾಬ್ ಟೆಕ್ನಿಷಿಯನ್ ಹುಝೈರ್ (23) ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಂಬುಲೆನ್ಸ್ ನಲ್ಲಿ ರೋಗಿಗಳು ಇರಲಿಲ್ಲ. ಮೆಡಿಸಿನ್ ಪಾರ್ಸೆಲ್ ವಿಚಾರವಾಗಿ ವಾಹನದಲ್ಲಿ ಬೆಳ್ತಂಗಡಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!