August 14, 2026

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ: ಇಬ್ಬರು ಚಾಲಕರು ಮೃತ್ಯು

0
image_editor_output_image892021686-1670220803286

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ ಕಡೆಯಿಂದ ಹೋಗುತ್ತಿದ್ದ ಲಾರಿ ನಡುವೆ ಇಳಿಜಾರು ಪ್ರದೇಶದಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಸ್ತೆ ಬದಿಯ ಹೊಂಡಕ್ಕೆ ಇಳಿದು ನಿಂತ ಪರಿಣಾಮ ಚಾಲಕರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು.

ಸದ್ಯ ಓರ್ವನನ್ನು ಹೊರಕ್ಕೆ ತೆಗೆದು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದು, ಇನ್ನೊರ್ವನ ಮೃತದೇಹ ಹೊರತೆಗೆಯಲು ಕಾರ್ಯಚರಣೆ ನಡೆಯುತ್ತಿದೆ ಎನ್ನಲಾಗಿದೆ

ಇನ್ನು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!