September 20, 2024

ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್: ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತ್ಯು

0

ರತ್ಲಾಂ: ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ರಸ್ತೆಬದಿಯ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಸಂಜೆ ಅಪಘಾತ ಸಂಭವಿಸಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಎಂಟು ಮಂದಿಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಕ್ರ ಸ್ಫೋಟಗೊಂಡ ಬೆನ್ನಲ್ಲೇ ಟ್ರಕ್ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.ರತ್ಲಾಂ ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ. ದೂರದಲ್ಲಿ ಸಾತ್ರುಂಡಾ ಗ್ರಾಮದ ರತ್ಲಾಂ-ಲೆಬಾದ್ ರಸ್ತೆಯಲ್ಲಿ ಅವಘಡ ಸಂಭವಿಸಿದೆ.

ಟ್ರಕ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಅಭಿಷೇಕ್ ತಿವಾರಿ ತಿಳಿಸಿದ್ದಾರೆ.

    Leave a Reply

    Your email address will not be published. Required fields are marked *

    error: Content is protected !!