ಚಪ್ಪಲಿ ಹಾಕಿಕೊಂಡು ದೈವದ ದೀವಟಿಗೆ: ದೈವರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವಮಾನ

ಬೆಂಗಳೂರು: ದೈವರಾಧನೆಗೆ ಸಂಸದ ತೇಜಸ್ವಿ ಸೂರ್ಯ ಅವಮಾನ ಮಾಡಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ.
ಹೌದು. ಚಪ್ಪಲಿ ಹಾಕಿಕೊಂಡು ತೇಜಸ್ವಿ ಅವರು ದೈವದ ದೀವಟಿಗೆ ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ನಿನ್ನೆ ಬೆಂಗಳೂರಿನಲ್ಲಿ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು.
ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿರುವುದನ್ನು ನಾವು ಕಾಣಬಹುದಾಗಿದೆ.