August 14, 2026

ನವಜಾತ ಶಿಶುಗಳ ವಾರ್ಡ್‌ನಲ್ಲಿ ವಿದ್ಯುತ್ ಕಡಿತ: 4 ಶಿಶುಗಳ ಬಲಿ

0
IMG-20221205-WA0022.jpg

ರಾಯಪುರ: ನವಜಾತ ಶಿಶುಗಳ ವಾರ್ಡ್‌ನಲ್ಲಿ 4 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಹಿನ್ನೆಲೆಯಲ್ಲಿ 4 ಶಿಶುಗಳು ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಂಬಿಕಾಪುರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ.

ಈ ಕುರಿತು ಛತ್ತೀಸ್‌ಗಡದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ಡಿಯೊ ಮಾಹಿತಿ ನೀಡಿದ್ದು, ‘ಘಟನೆ ಕುರಿತಂತೆ ತನಿಖೆ ನಡೆಸಲು ತನಿಖಾ ತಂಡ ರಚನೆಗೆ ಆರೋಗ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಹೆಚ್ಚಿನ ಮಾಹಿತಿ ಪಡೆಯಲು ಅಂಬಿಕಾಪುರ ಆಸ್ಪತ್ರೆಗೆ ತೆರಳುತ್ತಿದ್ದು, ತನಿಖೆ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ’ ಎಂದು ತಿಳಿಸಿದ್ದಾರೆ.

ಇನ್ನು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!