August 14, 2026

ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಾಂಶುಪಾಲರು: ಕಾಲೇಜು ಮುಂಭಾಗದಲ್ಲಿ ನ್ಯಾಯಕ್ಕಾಗಿ ವಿದ್ಯಾರ್ಥಿಗಳ ಹೋರಾಟ

0
IMG-20221205-WA0037.jpg

ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ.

ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ನಡೆಯಿಂದ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಮದ್ಯಾಹ್ನದಿಂದ ವಿದ್ಯಾರ್ಥಿಗಳು ಕಾಲೇಜಿನ ಹೊರಗಡೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ವಿದ್ಯಾರ್ಥಿಗಳ ಸಮಸ್ಯೆಯ ಕುರಿತಾಗಿ ಕೆಪಿಟಿ ಕಾಲೇಜಿನ ಪ್ರಾಂಶುಪಾಲರ ಬಳಿ ಚರ್ಚಿಸಲು ವಿದ್ಯಾರ್ಥಿ ಪರಿಷತ್ ನ ಪ್ರಮುಖ ಕಾರ್ಯಕರ್ತರು ತೆರಳಿದಾಗ ವಿದ್ಯಾರ್ಥಿಗಳನ್ನು ನಿಂದಿಸಿ, ಪರಿಷತ್ ನ ಕಾರ್ಯಕರ್ತರಿಗೆ ಕಾಲೇಜಿನ ವಿದ್ಯಾರ್ಥಿಗಳಿಂದ ಹೊಡೆಸುವುದಾಗಿ ಹೇಳಿದಾಗ ಕೆರಳಿದ ವಿದ್ಯಾರ್ಥಿ ಪರಿಷತ್ ನ ಕಾರ್ಯಕರ್ತರು ಕಾಲೇಜಿನ ಮುಂಬಾಗದಲ್ಲೆ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಮಧ್ಯಾಹ್ನದಿಂದ ನಡೆಯುತ್ತಿರುವ ಪ್ರತಿಭಟನೆಗೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೇ ನೀಡಿಲ್ಲ ಎಂದು ಎಬಿವಿಪಿ ನಾಯಕರು ಹೇಳಿದ್ದು ಪ್ರತಿಭಟನಾ ಸ್ಥಳಕ್ಕೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆಗೆ ಕ್ಷಮೆಯಾಚಿಸ ಬೇಕಾಗಿ ಆಗ್ರಹಿಸಿದ್ದಾರೆ.

ಪ್ರತಿಭಟನೆಯ ನೇತೃತ್ವವನ್ನು ವಿಭಾಗ ಸಂಚಾಲಕರಾದ ಹರ್ಷಿತ್ ಕೊಯ್ಲ , ಜಿಲ್ಲಾ ಸಂಚಾಲಕ್ ಶ್ರೇಯಸ್ ವಿಭಾಗ SFD ಪ್ರಮುಖ್ ನಿಶಾನ್ ಆಳ್ವ ಪ್ರಮುಖರಾದ ಸ್ಕಂದ ಕಿರಣ್, ಶ್ರೀಪಾದ್ ವಹಿಸಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತನ್ನು ಏರ್ಪಾಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!