August 13, 2026

ರಿವಾಲ್ವರ್‌ನಿಂದ ಹಾರಿದ ಗುಂಡು ತಲೆಗೆ ತಗಲಿ ವೈದ್ಯೆ ಮೃತ್ಯು: ಆತ್ಮಹತ್ಯೆ ಶಂಕೆ

0
image_editor_output_image48822078-1670319625513.jpg

ಚಿತ್ರದುರ್ಗ: ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ರೂಪಾ (50) ಅನುಮಾನಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದಾರೆ. ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ವಿ.ಪಿ. ಬಡಾವಣೆಯ ಮನೆಯಲ್ಲಿ ರೂಪಾ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ರೂಪಾ ಅವರು ಗಿರಿಶಾಂತ ಆರ್ಥೋ ಕೇರ್‌ ಸೆಂಟರ್‌ನ ಡಾ.ಕೆ.ಜಿ.ರವಿ ಅವರ ಪತ್ನಿ.

ಸೋಮವಾರ ಬೆಳಿಗ್ಗೆ ರೂಪಾ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಮನೆಯ ಕೆಲಸಗಾರರು ಗಮನಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಡಾ.ಕೆ.ಜಿ.ರವಿ ಪರಿಶೀಲಿಸಿದಾಗ ಪತ್ನಿ ಮೃತಪಟ್ಟಿದ್ದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಡ್‌ರೂಮಿನ ಟೇಬಲ್‌ ಮೇಲೆ ಡೆತ್‌ನೋಟ್ ಪತ್ತೆಯಾಗಿದೆ. ಇದರ ಆಧಾರದ ಮೇರೆಗೆ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ‘ರಿವಾಲ್ವರ್‌ನಿಂದ ಹಾರಿದ ಗುಂಡು ತಲೆಗೆ ತಗುಲಿ ರೂಪಾಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!