ದೆಹಲಿ: ಸಿಲಿಂಡರ್ ಸ್ಫೋಟಗೊಂಡು 17 ಮಂದಿಗೆ ಗಾಯ
ದೆಹಲಿ: ಭಾನುವಾರ ಬೆಳಗ್ಗೆ ವಾಯುವ್ಯ ದೆಹಲಿಯ ಗುಡಿಸಲುವೊಂದರಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ನಂತರ 17 ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಗಳು ತಿಳಿಸಿದ್ದಾರೆ.
ಅಜಾದ್‌ಪುರದ ಲಾಲ್ ಬಾಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹೊತ್ತಿಕೊಂಡ ಬಗ್ಗೆ ಆದರ್ಶ ನಗರ ಪೊಲೀಸ್ ಠಾಣೆಗೆ ಬೆಳಗ್ಗೆ 10.00 ಗಂಟೆ ಸುಮಾರಿಗೆ ಕರೆ ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಗಾಯಗೊಂಡ 17 ಜನರಲ್ಲಿ, 16 ಸಣ್ಣ ಸುಟ್ಟಗಾಯಗಳೊಂದಿಗೆ ಬಾಬು ಜಗಜೀವನ್ ರಾಮ್ ಸ್ಮಾರಕ ಆಸ್ಪತ್ರೆಗೆ ಮತ್ತು ಒಬ್ಬರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಸಾಗಿಸಲಾಯಿತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹೇಳಿದರು.
ಎಲ್‌ಪಿಜಿ ಸ್ಫೋಟ ಸಂಭವಿಸಿದೆ ಇದರಿಂದಾಗಿ ಐದು ಜನರಿಗೆ ಸುಟ್ಟ ಗಾಯಗಳಾಗಿವೆ ಎಂದು ದೆಹಲಿ ಅಗ್ನಿಶಾಮಕ ಸೇವೆಯ ನಿರ್ದೇಶಕ ಅತುಲ್ ಗಾರ್ಗ್ ಹೇಳಿದರು. ಸ್ಫೋಟದಲ್ಲಿ ಐದು ಮನೆಗಳಿಗೆ ಹಾನಿಯಾಗಿದೆ, ಬೆಂಕಿಯನ್ನು ನಂದಿಸಲಾಗಿದೆ ಮತ್ತು ತಂಪಾಗಿಸುವ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ವಿಚಾರಣೆಯಲ್ಲಿ ಪಪ್ಪುಕುಮಾರ್ ಮೂರನೇ ಮಹಡಿಯಲ್ಲಿರುವ ತನ್ನ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಗಳನ್ನು ಬದಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಈ ಪ್ರಕ್ರಿಯೆಯಲ್ಲಿ ಒಂದು ಸಿಲಿಂಡರ್ ಸ್ಫೋಟಗೊಂಡಿದೆ. ಆತನ ಮನೆಯ ಮೇಲ್ಛಾವಣಿ ಹಾರಿಹೋಗಿದ್ದು, ಗೋಡೆಗಳು ಕುಸಿದಿವೆ. ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.





