ಉಳ್ಳಾಲ: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ – ನಾಲ್ವರು ಆರೋಪಿಗಳ ಬಂಧನ
ಉಳ್ಳಾಲ: ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿರುವ ಘಟನೆ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನಡೆದಿದೆ.
ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು.
ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ ಆರೋಪಿಯಾಗಿದ್ದು, ಈತ ಈ ಹಿಂದೆ ಪಿಲಾರು, ಕಾಪಿಕಾಡು ಪ್ರದೇಶಗಳಲ್ಲೂ ಬಾಡಿಗೆ ಮನೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ.
ಇನ್ನು ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.




