August 14, 2026

ಬಂಟ್ವಾಳ: ಯುವ ವಕೀಲನ ವಿರುದ್ಧ ಸುಳ್ಳು ಪ್ರಕರಣ, ಪುಂಜಾಲಕಟ್ಟೆ ಪೊಲೀಸರ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ

0
image_editor_output_image1348959021-1670402805931.jpg

ಬಂಟ್ವಾಳ: ಯುವ ವಕೀಲ ಕುಲ್ ದೀಪ್ ಶೆಟ್ಟಿಯವರನ್ನು ಸಿವಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಪ್ರಕರಣ ದಾಖಲಿಸಿ ದೌರ್ಜನ್ಯ ನಡೆಸಿದ ಪುಂಜಾಲ ಕಟ್ಟೆ ಪೊಲೀಸರ ಅಮಾನತಿಗೆ ಆಗ್ರಹಿಸಿ ಇಂದು ಬಂಟ್ವಾಳ ನ್ಯಾಯಾಲಯದ ಮುಂಭಾಗ ಯುವ ವಕೀಲರ ವೇದಿಕೆ ಬಂಟ್ವಾಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ವಕೀಲರಾದ ಸುರೇಶ್ ಶೆಟ್ಟಿ ಮಾತನಾಡಿ ಪೋಲಿಸರ ಈ ಕೃತ್ಯವು ಖಂಡನೀಯವಾಗಿದ್ದು, ಇದು ಇಡೀ ವಕೀಲ ಸಮುದಾಯವನ್ನೇ ಅವಮಾನಿಸುವ ಕ್ರಮ ವಾಗಿದೆ. ಇದು ಸಂವಿದಾನ ವಿರೋಧಿ ಕೃತ್ಯವಾಗಿದ್ದು ಪೋಲೀಸರ ಇಂತಹ ಕೃತ್ಯದ ವಿರುದ್ಧ ಇಡೀ ವಕೀಲ ಸಮುದಾಯ ಒಗ್ಗಟ್ಟಾಗಿದ್ದು, ಕೂಡಲೇ ಹಲ್ಲೆ ಸಡೆಸಿದ ಪೋಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!