August 14, 2026

KGF ಸಿನೆಮಾದ ತಾತಾ ಖ್ಯಾತಿಯ ಕೃಷ್ಣ ರಾವ್ ನಿಧನ

0
image_editor_output_image-382833668-1670413840724.jpg

ಬೆಂಗಳೂರು: ಯಶ್ ನಟನೆಯ ಕೆಜಿಎಫ್ ಸಿನಿಮಾದಲ್ಲಿ ಪುಟ್ಟ ಪಾತ್ರವಾದರೂ, ಜನರು ಗುರುತಿಸುವಂತಹ ನಟನೆ ಮಾಡಿದ್ದ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆ ಕಾರಣದಿಂದಾಗಿ ಮೊನ್ನೆಯಷ್ಟೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದಾಗಿ ಐದು ದಿನಗಳ ಹಿಂದೆಯಷ್ಟೇ ಅವರನ್ನು ಬೆಂಗಳೂರಿನ ಸೀತಾ ಸರ್ಕಲ್ ಬಳಿ ಇರುವ ವಿನಾಯಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನಗಳಿಂದ ವೈದ್ಯರು ಕೂಡ ಸತತ ಪ್ರಯತ್ನದಲ್ಲಿದ್ದರು. ಇಂದು (ಡಿ.7) ಚಿಕಿತ್ಸೆ ಫಲಿಸದೇ ಕೃಷ್ಣ ಅವರು ಬಾರದ ಲೋಕಕ್ಕೆ ಹೋಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!