August 14, 2026

ಕುತ್ತಿಗೆಗೆ ಉರುಳು ಬಿಗಿದ ಸ್ಥಿತಿಯಲ್ಲಿ ಹುಲಿಯ ಶವ ಪತ್ತೆ: ಅರಣ್ಯ ಅಧಿಕಾರಿಗಳಿಂದ ತನಿಖೆ

0
IMG-20221207-WA0020.jpg

ಮಧ್ಯಪ್ರದೇಶ: 2 ವರ್ಷದ ಹುಲಿಯ ಶವವೊಂದು ಕುತ್ತಿಗೆಗೆ ಉರುಳು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

ಈ ಬಗ್ಗೆ ಮಾಹಿತಿ ಬಂದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಹುಲಿಯ ಕಳೇಬರವನ್ನು ಮರಣೋತ್ತರ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ.

ಇನ್ನು ಯಾರೋ ಕಾಡು ಪ್ರಾಣಿ ಬೇಟೆಗೆ ಉರುಳು ಇಟ್ಟಿದ್ದು ಅದಕ್ಕೆ ಹುಲಿ ಸಿಕ್ಕಿ ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದು ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧಾರಿ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ನಾಲ್ಕು ಹುಲಿ ಮರಿಗಳು ಶನಿವಾರ ಸಾವನ್ನಪ್ಪಿದ್ದವು ಎನ್ನಲಾಗಿದೆ.

ಘಟನೆ ಕುರಿತು ತನಿಖೆ ನಡೆಸುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!